ನಗರದ ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕೊರೋನಾ 2ನೇ ಅಲೆ ನಿಯಂತ್ರಿಸಲುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ 14 ದಿನಗಳ ಕೊರೋನಾ ಕರ್ಫ್ಯೂ ಮಂಗಳವಾರ ರಾತ್ರಿಯಿಂದಲೇ ಜಾರಿಗೊಂಡಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಹಿವಾಟು, ಜನ ಜೀವನ ಸ್ತಬ್ಧಗೊಂಡಿದೆ.

ಕಠಿಣ ಕೊರೋನಾ ಕರ್ಫ್ಯೂಗಾಗಿ ರಾಜ್ಯದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ವಾರದ ಇದ್ದ ವೀಕೆಂಡ್ ಕರ್ಫ್ಯೂ ಬಳಿಕ ಮೊದಲ ಬಾರಿಗೆ ವಿಧಿಸಿರುವ ಕೊರೋನಾ ಕರ್ಫ್ಯೂ ಇದಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ರಸ್ತೆಗಿಳಿಯದಂತೆ ನಿರ್ದೇಶಿಸಲಾಗಿದೆ. ಎಲ್ಲಾ ಜಿಲ್ಲಾ ಗಡಿಗಳಲ್ಲಿ ಪೊಲೀಸರು ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದಾರೆ. ತುರ್ತು ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಪ್ರತಿಯೊಂದು ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

NEWS DESK

TIMES  OF BENGALURU