ಆನ್ ಲೈನ್ ತರಗತಿ ಆರಂಭಕ್ಕೆ ಬೆಂ. ವಿವಿ ನಿರ್ಧಾರ

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಇದೀಗ ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಕೆ.ವೇಣುಗೋಪಾಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ವಿವಿ ವ್ಯಾಪ್ತಿಯ ಎಲ್ಲಾ ಸಂಯೋಜಿತ ಕಾಲೇಜುಗಳು ಸ್ನಾತಕೋತ್ತರ ಕೋರ್ಸ್’ನ 4ನೇ ಸೆಮಿಸ್ಟರ್ ತರಗತಿಗಳನ್ನು ಆನ್’ಲೈನ್ ನಲ್ಲಿ ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

NEWS DESK

TIMES OF BENGALURU