ಬಿಎಂಟಿಸಿಯಿಂದ 150 ಬಸ್ ಸಂಚಾರ

ಬೆಂಗಳೂರು; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ಲಾಕ್ ಡೌನ್ ಜಾರಿಗೆ ಬಂದಿದೆ.

ಲಾಕ್ ಡೌನ್ ಅವಧಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಆದರೆ, ಅಗತ್ಯ ಸೇವೆಗಳಿಗಾಗಿ ಬೆಂಗಳೂರು ನಗರದಲ್ಲಿ ಬಿಎಂಟಿಸಿ 150 ಬಸ್‌ಗಳನ್ನು ಓಡಿಸಲಿದೆ.96 ಮಾರ್ಗಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯ ತನಕ ಏಪ್ರಿಲ್ 27 ರಿಂದ ಮೇ 12ರ ತನಕ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಬಿಎಂಟಿಸಿ ಹೇಳಿದೆ.

NEWS DESK

TIMES OF BENGALURU