ಬೆಂಗಳೂರು : ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಹದಿನಾಲ್ಕು ದಿನಗಳ ಅವಧಿಯ ಲಾಕ್ಡೌನ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಕೊರೊನಾ ಸರಪಳಿಯನ್ನು ಮುರಿಯಲು ಎರಡು ವಾರಗಳ ಕಠಿಣ ಲಾಕ್ಡೌನ್ ಹೇರಲಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ನಾನು ಕೇಳಿಕೊಳ್ಳುತ್ತೇನೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರಕ್ಕೆ ಬೆಂಬಲ ನೀಡಿ. ಮನೆಯೊಳಗೇ ಇರಿ. ನಾವೆಲ್ಲರೂ ಒಟ್ಟಾದರೆ ಕೊರೊನಾವನ್ನು ಸೋಲಿಸುವುದು ಸುಲಭವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
NEWS DESK
TIMES OF BENGALURU