ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

ಬೆಂಗಳೂರು: ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ತೆರೆದಿರುವುದಿಲ್ಲ, ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಇಂದು ರಾತ್ರಿ 9 ಗಂಟೆಯಿಂದ ಹೊಸ ಗೈಡ್‍ಲೈನ್ಸ್ ಜಾರಿಯಾಗಲಿದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದೆ. ಮತ್ತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ ಇರುತ್ತೆ. ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿಗಳು ತೆರೆದಿರುವುದಿಲ್ಲ. ಹೋಮ್ ಡೆಲಿವರಿ, ಇ ಕಾಮರ್ಸ್ ಗೆ ಅವಕಾಶ ಇದೆ. ಬಾರ್, ಪಬ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಇದೆ.

NEWS DESK

TIMES OF BENGALURU