ಅಗ್ರಿ ವಾರ್ ರೂಮ್ ಆರಂಭಿಸಿದ ಕೃಷಿ ಇಲಾಖೆ

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ಘೋಷಿಸಿರುವ ಈ ಹದಿನಾಲ್ಕು ದಿನಗಳ ಲಾಕ್ಡೌನ್‌ನಲ್ಲಿ ರೈತರಿಗಾಗಲಿ ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. ಕಳೆದ ವರ್ಷ ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ಅಗ್ರಿವಾರ್ ರೂಮ್ ಆರಂಭಿಸಿರುವಂತೆಯೇ ಈ ಬಾರಿಯೂ ರೈತರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೆನ್ನೆಲುಬಾಗಿ ನಿಂತಿದ್ದು ಕೃಷಿ ಇಲಾಖೆಯಲ್ಲಿ “ಅಗ್ರಿ ವಾರ್ ರೂಮ್” ಆರಂಭಿಸಿದ್ದಾರೆ.

ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಲಾಕ್ಡೌನ್‌ ಅವಧಿಯಲ್ಲಿ ಯಾವುದೇ ಇಲಾಖೆಯಾಗಲೀ ಅಧಿಕಾರಿಗಳಾಗಲೀ ಕೃಷಿ ಪರಿಕರ ಸಾಗಾಣಿಕೆ ರೈತರ ಕೃಷಿ ಚಟುವಟಿಕೆಗಳಿಗೆ ಅಡ್ಡಿಯನ್ನುಂಟು ಮಾಡಬಾರದು ಎಂದು ಕೃಷಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

NEWS DESK

TIMES OF BENGALURU