ಬೆಂಗಳೂರು: ಲಾಕ್ಡೌನ್ ವೇಳೆ ಉದ್ಯೋಗ ಕಡಿತ ಮಾಡಬಾರದು ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮನವಿ ಮಾಡಿದ್ದಾರೆ. ಖಾಸಗಿ ಕಂಪನಿಗಳು, ಕಾರ್ಖಾನೆಗಳು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಬಾರದು. ಉದ್ಯೋಗದಾತರು ಸಿಬ್ಬಂದಿಗೆ ವೇತನ ಕಡಿತಗೊಳಿಸಬಾರದು. ಬಾಡಿಗೆ, ಭೋಗ್ಯಕ್ಕೆ ಇರುವವರನ್ನು ಬಲವಂತದ ತೆರವು ಮಾಡಬಾರದು ಎಂದು ಸೂಚಿಸಲಾಗಿದೆ. ಕರ್ಫ್ಯೂ ಅವಧಿಯಲ್ಲಿ ಉದ್ಯೋಗದಾತರು ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂಗಡಿ ಮಾಲೀಕರು ಬಾಡಿಗೆಗೆ ನೀಡಿರುವ ಅಂಗಡಿ ಮತ್ತು ಅಂಥದ್ದೇ ಸ್ಥಳಗಳನ್ನು ಬಾಡಿಗೆದಾರರಿಂದ ತೆರವುಗೊಳಿಸಲು ಮುಂದಾಗಿರುವುದೂ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.
NEWS DESK
TIMES OF BENGALURU