ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ನಾಲ್ಕನೆ ಮಹಡಿಯಿಂದ ಹಾರಿ ಕೋವಿಡ್ ಸೋಂಕಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಕುಮಾರ್(27) ಎಂಬಾತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುತಿಸಿದ್ದಾರೆ. ನಗರದ ಹೊಂಗಸಂದ್ರ ನಿವಾಸಿಯಾಗಿರುವ ಕುಮಾರ್ ಗೆ ಸೋಂಕು ದೃಢಪಟ್ಟ ಹಿನ್ನೆಲೆ ಎ.25ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ ನಾಲ್ಕನೇ ಮಹಡಿಯಿಂದ ಜಿಗಿದು ನೆಲಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ರಕ್ತಸ್ರಾವವಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕುಮಾರ್ ಗೆ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
NEWS DESK
TIMES OF BENGALURU