ಬೆಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ 14ದಿನಗಳ ಕರ್ಫ್ಯೂ ಸಂದರ್ಭದಲ್ಲಿ ವಿಧಿಸಲಾಗಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿರ್ಬಂಧಗಳ ಅನುಷ್ಠಾನ ಮೇಲುಸ್ತುವಾರಿಗೆ ಐದು ಜನ ಎಡಿಜಿಪಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.ರಾಜ್ಯದ ಎಲ್ಲಾ ಕಾರಾಗೃಹಗಳನ್ನು ಸ್ಯಾನಿಟೈಸ್ ಮಾಡುವಂತೆ ಸೂಚಿಸಿದ್ದೇನೆ.
ಜೈಲುಗಳಲ್ಲಿನ ಪಾಸಿಟಿವ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸೋಂಕಿತ ಕೈದಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಾಜ್ಯದ ಎಲ್ಲಾ ಕಾರಾಗೃಹ ಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುತ್ತಿರುವುದಾಗಿ ತಿಳಿಸಿದರು.
NEWS DESK
TIMES OF BENGALURU