ಹೊಸ ಶೈಕ್ಷಣಿಕ ವರ್ಷದ ಬೋಧನಾ ಶುಲ್ಕಕ್ಕೆ ಅನುಮತಿ

ಬೆಂಗಳೂರು : ಹೊಸ ಶೈಕ್ಷಣಿಕ ವರ್ಷದ ಬೋಧನಾ ಶುಲ್ಕ ಪಡೆಯಲು ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ .ಆದರೆ ಈ ಹಿಂದಿನ ಶೈಕ್ಷಣಿಕ ವರ್ಷದ ಶೇಕಡ 70 ಮಾತ್ರ ಪಡೆಯಬೇಕು ಎಂದು ಸೂಚಿಸಿದೆ . ಪೋಷಕರಿಗೆ ಎರಡು ಕಂತುಗಳಲ್ಲಿ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ . ಶಾಲಾಭಿವೃದ್ಧಿ ಶುಲ್ಕ ಮತ್ತು ಇತರ ಯಾವುದೇ ದೇಣಿಗೆ ಸ್ವೀಕರಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ .

NEWS DESK

TIMES OF BENGALURU