ಬಿಬಿಎಂಪಿಯಿಂದ ಶೇ.5 ರಷ್ಟು ತೆರಿಗೆ ರಿಯಾಯಿತಿ

ಬೆಂಗಳೂರು : ಕೊರೋನಾ ಎರಡನೇ ಅಲೆಯ ಅಬ್ಬರದಿಂದಾಗಿ ಸಿಲಿಕಾನ್ ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಇಂತಹ ಜನರಿಗೆ ಬಿಬಿಎಂಪಿ ಇದೀಗ ಗುಡ್ ನ್ಯೂಸ್ ನೀಡಿದೆ. 2021-22ನೇ ಸಾಲಿನ ಆಸ್ತಿ ತೆರಿಗೆಯನ್ನು ದಿನಾಂಕ 31-05-2021ರೊಳಗಾಗಿ ಕಟ್ಟುವವರಿಗೆ, ಶೇ 5% ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.ಈ ಕುರಿತಂತೆ ಬಿಬಿಎಂಪಿ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿಗೆ ಸಂಬಂಧಪಟ್ಟಂತೆ ಆರ್ಥಿಕ ವರ್ಷದ ಪೂರ್ಣ ಆಸ್ತಿ ತೆರಿಗೆಯನ್ನು ದಿನಾಂಕ: 30-04-2021 ರ ಒಳಗೆ ಪಾವತಿಸಿದ್ದಲ್ಲಿ ಶೇಕಡ 5 ರಷ್ಟು ರಿಯಾಯಿತಿಯನ್ನು ನೀಡಲು ಅವಕಾಶವಿರುತ್ತದೆ.

NEWS DESK

TIMES  OF BENGALURU