ಬೆಂಗಳೂರು: ಹದಿನೆಂಟು ವರ್ಷ ಮೇಲ್ಪಟ್ಟ ಜನರಿಗೆ ಮೇ 1ರಿಂದ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಲಸಿಕೆಯ ಕೊರತೆ ಎದುರಾಗಿದೆ. ’18 ವರ್ಷದಿಂದ 44 ವರ್ಷ ವಯಸ್ಸಿನವರು ಲಸಿಕೆ ಹಾಕಿಸಿಕೊಳ್ಳಲು ನಾಳೆ ಆಸ್ಪತ್ರೆಗಳಿಗೆ ತೆರಳುವುದು ಬೇಡ’ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.18 ರಿಂದ 44 ವರ್ಷದವರಿಗೆ ಲಸಿಕೆ ಒದಗಿಸುವ ಸಂಬಂಧ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಇನ್ನೂ 1 ಕೋಟಿ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರಕ್ಕೆ ಪೂರೈಕೆ ಮಾಡಿಲ್ಲ. ಹಾಗಾಗಿ, ಮೇ 1 ರಿಂದ ವಿತರಣೆ ನಡೆಯುವುದಿಲ್ಲ ‘ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
NEWS DESK
TIMES OF BENGALURU