ವಾಹನ ಮಾಲೀಕರಿಗೆ ಗುಡ್ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಎರಡನೇ ಅಲೆ ಅಬ್ಬರಿಸುತ್ತಿದೆ. ಇದೇ ಸಂದರ್ಭದಲ್ಲಿ ವಾಹನ ಮಾಲೀಕರಿಗೆ ವಾಹನಗಳ ತೆರಿಗೆ ಪಾವತಿಸಲು ನೀಡಲಾಗಿದ್ದಂತ ಅವಧಿ ಇಂದಿನ ಕೊನೆಯ ದಿನಾಂಕವನ್ನು ಮೇ.15ರವರೆಗೆ ವಿಸ್ತರಿಸಿ, ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತು ಮಾಹಿತಿ ನೀಡಿದಂತ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಕೋವಿಡ್ 19ರ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಸರ್ಕಾರದ ಅಧಿಸೂಚನೆ ಸಂಖ್ಯೆ ಟಿಡಿ 1 ಟಿಡಿಆರ್ 2021 ದಿನಾಂಕ: 12.04.2021 ಅನ್ವಯ ದಿನಾಂಕ: 15.04.2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ:30.04.2021ರ ವರೆಗೆ ನೀಡಲಾಗಿತ್ತು. ಇಂತಹ ಅವಧಿಯನ್ನು ಮತ್ತು ದಿನಾಂಕ:15.05.2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ:31.05.2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

NEWS DESK

TIMES OF BENGALURU