ಇಂದು ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಚರ್ಚೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಜೋರಾಗಿದ್ದು, ಇಂದು 48 ಸಾವಿರ ಜನರಿಗೆ ಕೊರೊನಾ ಸೋಂಕು ತಗುಲಿ, 217 ಜನ ಸಾವನ್ನಪ್ಪಿದ್ದಾರೆ. ಹೌದು, ರಾಜ್ಯದಲ್ಲಿ ಕೊರೊನಾ ತಡೆಗೆ ಸರ್ಕಾರ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆದರೆ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆ ನಾಳೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಂಜೆ 4:30 ಕ್ಕೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಆಸ್ಪತ್ರೆ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಕೆಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎನ್ನಲಾಗಿದೆ. .ಲಾಕ್‌ಡೌನ್‌ ಮಾಡಿದರೂ ಕೊರೋನಾ ನಿಯಂತ್ರಣಕ್ಕೆ ಸಿಗದಿರುವುದು, ಖಾಸಗಿ ಆಸ್ಪತ್ರೆಗಳು ಸರ್ಕಾರ ಸೂಚಿಸಿದಷ್ಟು ಬೆಡ್ ಬಿಟ್ಟು ಕೊಡದಿರುವುದು ಸೇರಿ ಹಲವಾರು ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ಆಗಲಿದೆ.

NEWS DESK

TIMES OF BENGALURU