ಆಸ್ಪತ್ರೆಗಳಲ್ಲಿನ ಹೆಲ್ಪ್ ಡೆಸ್ಕ್ ಗಳಿಗೆ ಗೌರವ್ ಗುಪ್ತಾ ಭೇಟಿ

ಬೆಂಗಳೂರು : ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಗೆ ಭೇಟಿ ನಿಡಿ ಹೆಲ್ಪ್ ಡೆಸ್ಕ್ ಹೇಗೆ ಕಾರ್ಯನಿರ್ವಹಿಸಲಿದೆ ಎಂಬುದನ್ನು ಪರಿಶೀಲನೆ ನಡೆಸಲಾಗಿದ್ದು, ಆಸ್ಪತ್ರೆ ಹಾಗೂ ನಾಗರಿಕರ ನಡುವೆ ಸಮನ್ವಯ ಕೊಂಡಿಯಾಗಿ ಹೆಲ್ಪ್ ಡೆಸ್ಕ್ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯ ಆಯುಕ್ತರು ಗೌರವ್ ಗುಪ್ತ ರವರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಅಪೋಲೋ ಆಸ್ಪತ್ರೆ(ಜಯನಗರ)ಯಲ್ಲಿ ನಿರ್ಮಿಸಿರುವ ಹೆಲ್ಪ್ ಡೆಸ್ಕ್, ವಿಲ್ಸನ್ ಗಾರ್ಡನ್ ಹೆರಿಗೆ ಆಸ್ಪತ್ರೆಯಲ್ಲಿ ಟ್ರಾನ್ಸಿಟ್ ಆಕ್ಸಿಜನ್ ಸೆಂಟರ್ ಹಾಗೂ ಕಿದ್ವಾಯಿ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾಡುವ ಲ್ಯಾಬ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂಡಿಗೆ ಮುಖ್ಯ ಆಯುಕ್ತರು ರವರು ಮಾತನಾಡಿ,ನಗರದ 50 ಪ್ರಮುಖ ಆಸ್ಪತ್ರೆಗಳಲ್ಲಿ ಹೆಲ್ಪ್ ಡೆಸ್ಕ್ ತೆರಯಲಾಗುತ್ತಿದ್ದು, ಈಗಾಗಲೆ 25 ಆಸ್ಪತ್ರೆಗಳಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ಪ್ರಾರಂಭಿಸಲಾಗಿದೆ. ಉಳಿದ ಕಡೆಯೂ ಶೀಘ್ರ ಹೆಲ್ಪ್ ಡೆಸ್ಕ್ ತೆರೆಯಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

NEWS DESK

TIMES OF BENGALURU