ಬೆಂಗಳೂರು : ನಗರದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 26,756 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 93 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 24 ಗಂಟೆಯಲ್ಲಿ ನಗರದಲ್ಲಿ ಹೊಸದಾಗಿ 26,756 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 756740ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 5123 ಜನರು ಸೇರಿದಂತೆ ಇದುವರೆಗೆ 491306 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಹೀಗಾಗಿ ನಗರದಲ್ಲಿ 259058 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
NEWS DESK
TIMES OF BENGALURU