ಕೊರೋನಾ ವಾರಿಯರ್ಸ್ ಗಳ ಸೇವೆಗೆ ಸಾರಿಗೆ ಸೌಲಭ್ಯ

ಬೆಂಗಳೂರು: ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕರ್ಫ್ಯೂ ವಿಧಿಸಿದ್ದರು ಸಹ ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ತುರ್ತು ಸನ್ನಿವೇಶವನ್ನು ಎದುರಿಸುತ್ತಿದೆ. ಆದ್ದರಿಂದ ಸಾರಿಗೆ ನಿಗಮ ಗಳಿಂದಲೂ ಸಹ ಈ ಸೂಕ್ಷ್ಮ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಪ್ರಯತ್ನಗಳಿಗೆ ಕೈಜೋಡಿಸಿ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

NEWS DESK

TIMES OF BENGALURU