ದುಡಿಯುವ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸಿ

ಬೆಂಗಳೂರು : ರಾಜ್ಯದಲ್ಲಿ ಈಗ ಕರ್ಫ್ಯೂ ಹೇರಿಕೆ ಮಾಡಿರುವುದರಿಂದ ದುಡಿಯುವ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕವೂ ಸೇರಿದಂತೆ ಅನೇಕ ಜಿಲ್ಲೆಗಳ ಜನ ಬೇಸಿಗೆಯಲ್ಲಿ ನಗರಗಳಿಗೆ ವಲಸೆ ಹೋಗಿ ಕೂಲಿ ನಾಲಿ ಮಾಡಿ ಒಂದಿಷ್ಟು ಹಣ ಸಂಪಾದಿಸಿ ಅದನ್ನು ಮುಂಗಾರಿನ ಕೃಷಿ ಕೆಲಸಗಳಿಗೆ ವಿನಿಯೋಗಿಸುತ್ತಾರೆ.

ಈಗ ಕರ್ಫ್ಯೂ ಹೇರಿಕೆ ಮಾಡಿರುವುದರಿಂದ ಅವರ ದುಡಿಮೆ ಸಂಪೂರ್ಣ ಹಾಳಾಗಿದೆ. ದುಡಿಯಲೆಂದು ಬಂದವರು ಮರಳಿ ವಾಪಸ್​​ ಹೋಗಿದ್ದಾರೆ. ಆದ್ದರಿಂದ ಸರ್ಕಾರ ಈ ಎಲ್ಲ ರೈತಾಪಿ ಕುಟುಂಬಗಳಿಗೆ ಬೀಜ, ಗೊಬ್ಬರ, ಔಷಧ ಮುಂತಾದವುಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ .

NEWS DESK

TIMES OF BENGALURU