ಮನೆ ಮನೆಗೂ ತೆರಳಿ ಲಸಿಕೆ ನೀಡಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಸಿಕೆ ಇಲ್ಲದೇ ಇಂದು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭಿಸಿದ್ದಾರೆ. ಇದು ಕೇವಲ ಫೋಟೋಗಾಗಿ ಅಭಿಯಾನ ಆರಂಭಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡೋದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಪೋಲಿಯೋ ಮಾದರಿಯಲ್ಲಿ ಕೋವಿಡ್ ಲಸಿಕೆ ನೀಡಬೇಕು. ಮನೆ ಮನೆಗೂ ತೆರಳಿ ಕೋವಿಡ್ ಲಸಿಕೆ ನೀಡಬೇಕು. ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ 2 ಸಾವಿರ ಕೋಟಿ ರೂ. ಬೇಕು. ಎಂದು ಹೇಳಿದ್ದಾರೆ.

NEWS DESK

TIMES OF BENGALURU