ಸಾವಿರ ಮರಗಳ ತೆರವಿಗೆ ನಿಂತ ನಮ್ಮ ಮೆಟ್ರೋ

ಬೆಂಗಳೂರು: ನಮ್ಮ ಮೆಟ್ರೊ ಎರಡನೇ ಹಂತದ ಸಿಲ್ಕ್ ಬೋರ್ಡ್ ಹಾಗೂ ಕೆ.ಆರ್. ಪುರ (ರೀಚ್ 2ಎ) ನಡುವಿನ ಮೆಟ್ರೊ ರೈಲು ಮಾರ್ಗ ನಿರ್ಮಾಣಕ್ಕೆ 1026 ಮರಗಳಿಗೆ ಕೊಡಲಿಯೇಟು ಬೀಳಲಿದೆ. ಬಿಎಂಆರ್‍ಸಿಎಲ್‍ನ ಈ ನಡೆಗೆ ಪರಿಸರ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡಬೇಕು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‍ಸಿಎಲ್) ಬಿಬಿಎಂಪಿಗೆ ಪ್ರಸ್ತಾವ ಸಲ್ಲಿಸಿತ್ತು. ಇದಕ್ಕೆ ಬಿಬಿಎಂಪಿ ಅನುಮತಿ ನೀಡಿದೆ. ಆದಾಗ್ಯೂ, ಈ ಮರಗಳ ತೆರವಿಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಹತ್ತು ದಿನ ಕಾಲಾವಕಾಶ ನೀಡಲಾಗಿದೆ ಎಂದು ಪಾಲಿಕೆ ತಿಳಿಸಿದೆ.

NEWS DESK

TIMES OF BENGALURU