ಅಪಾರ್ಟ್ ಮೆಂಟ್ ವೊಂದರಲ್ಲಿ 20 ಜನರಿಗೆ ಸೋಂಕು

ಬೆಂಗಳೂರು : ಅಪಾರ್ಟ್‌ಮೆಂಟ್‌ವೊಂದರಲ್ಲಿ ಪ್ರತಿಷ್ಠೆಗೆಂದು ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದ ನಂತರ 20ಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದು ಈ ಅಪಾರ್ಟ್‌ಮೆಂಟ್‌ ಅನ್ನು ಕಿರು ಸೋಂಕಿತ ವಲಯ ಎಂದು ಘೋಷಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.ನಗರದ ಪದ್ಮನಾಭನಗರದ 100 ಅಡಿ ಹೊರ ವರ್ತುಲ ರಸ್ತೆಯಲ್ಲಿರುವ ಎಸಿಎಸ್‌ ಮೇಘನಾ ಮತ್ತು ಶಾಲಿನಿ ಅಪಾರ್ಟ್‌ಮೆಂಟ್‌ನಲ್ಲಿ ಮಾರ್ಚ್‌ ಅಂತ್ಯದವರೆಗೂ ಒಂದೂ ಸೋಂಕಿತ ಪ್ರಕರಣಗಳು ಇರಲಿಲ್ಲ.

ನಗರದಲ್ಲಿ ಕೊರೋನಾ ಸೋಂಕು ಹರಡುವಿಕೆ ತಡೆಯಲು ಸರ್ಕಾರ ಜನತಾ ಕರ್ಫ್ಯೂ ಜಾರಿಗೆ ತಂದು ಹೆಚ್ಚು ಜನರು ಸೇರುವ ಎಲ್ಲ ಕಾರ್ಯಕ್ರಮಗಳನ್ನು ನಿರ್ಬಂಧಿಸಿದ್ದರೂ ಸಹ ಮಾರ್ಚ್‌ 28ರಂದು ಅಪಾರ್ಟ್‌ಮೆಂಟ್‌ನಲ್ಲಿ ದೊಡ್ಡಮಟ್ಟದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ಇದೀಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 20 ಮಂದಿಗೆ ಕೊರೋನಾ ಸೋಂಕು ತಗುಲಿದೆ.

NEWS DESK

TIMES OF BENGALURU