ಪಿಯು ಪರೀಕ್ಷೆ ಮುಂದೂಡಿಕೆ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕೈ ಮೀರಿದೆ. ಹೀಗಾಗಿ ಮೇ. 16 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕಾ ? ಅಥವಾ ಮುಂದೂಡಬೇಕಾ? ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ನಿಗದಿತ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸಿದ್ದರು. ಆದರೆ, ರಾಜ್ಯದಲ್ಲಿ ದಿನಕ್ಕೆ ವರದಿಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ 40 ಸಾವಿರ ಗಡಿ ದಾಟಿದೆ. ಹೀಗಾಗಿ ಪಿಯುಸಿ ಪರೀಕ್ಷೆ ಮುಂದೂಡುವ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ ಅಧಿಕಾರಿಗಳ ಜತೆ ಸಭೆ ಕರೆದಿದ್ದಾರೆ.

NEWS DESK

TIMES OF BENALURU