ಮತ್ತೆ ಕೊರೋನಾ ಗೈಡ್ ಲೈನ್ಸ್ ಪರಿಷ್ಕರಿಸಿದ ಸರ್ಕಾರ

ಬೆಂಗಳೂರು: ಕೊರೊನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಮತ್ತೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ರಾಜ್ಯದಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಇನ್ನೂ ಹಾಪ್‌ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಇರಲಿದ್ದು, ಅವುಗಳಿಗೆ ವಿನಾಯಿತಿ ನೀಡಿಲ್ಲ.

ಎಪಿಎಂಸಿ ಹಾಗೂ ದಿನಸಿ ಅಂಗಡಿಗಳಿಗೆ ಸಮಯ ನಿಗದಿ ಮಾಡಿರುವ ಸರ್ಕಾರ, ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಮಾತ್ರ ಅವಕಾಶ ಕಲ್ಪಿಸಿದೆ. ಅಲ್ಲದೆ ವ್ಯಾಪಾರಿಗಳು ಮಾರುಕಟ್ಟೆ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂಬ ಷರತ್ತು ವಿಧಿಸಿದೆ .

NEWS DESK

TIMES OF BENGALURU