ಆಮ್ಲಜನಕ ಪೂರೈಕೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಿ

ಬೆಂಗಳೂರು : ಚಾಮರಾಜನಗರ ಜಿಲ್ಲೆಗೆ ಪೂರೈಕೆಯಾಗಬೇಕಾದ ನಿಗದಿತ ಪ್ರಮಾಣದ ಆಮ್ಲಜನಕ ಸಕಾಲಕ್ಕೆ ಜಿಲ್ಲೆಗೆ ಪೂರೈಕೆಯಾಗುವಲ್ಲಿ ವ್ಯತ್ಯಯವಾದ ಪ್ರಕರಣ ಕುರಿತು ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡು ಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರದ ಉಸ್ತುವಾರಿ ಸಚಿವರೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ರಾಜ್ಯ ಆಮ್ಲಜನಕ ಪೂರೈಕೆ ಉಸ್ತುವಾರಿ ಅಧಿಕಾರಿ ಡಿಐಜಿ ಪ್ರತಾಪ ರೆಡ್ಡಿಯವರೊಂದಿಗೆ ಸಭೆ ನಡೆಸಿದ್ದು, ಜಿಲ್ಲೆಗೆ ಪೂರೈಕೆಯಾಗಬೇಕಾದ ನಿಗದಿತ ಪ್ರಮಾಣದ ಆಮ್ಲಜನಕ ಯಾವುದೇ ವ್ಯತ್ಯಯವಾಗದಂತೆ ಸಕಾಲದಲ್ಲಿ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದೇನೆ ಎಂದರು.

NEWS DESK

TIMES OF BENGALURU