ದುರಂತದ ನಂತರ ಎಚ್ಚೆತ್ತುಕೊಂಡ ಸರ್ಕಾರ

ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಕಾಲದಲ್ಲಿ ಆಕ್ಸಿಜನ್ ಸಿಗದೇ 23 ರೋಗಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ, ತನಿಖೆ ನಡೆಸಿ, ಮೂರು ದಿನಗಳಲ್ಲಿ ವರದಿ ನೀಡುವಂತೆ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಎನ್ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದು, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ದಿನಾಂಕ 02-05-2021ರ ಬೆಳಿಗ್ಗೆ 9 ಗಂಟೆಯಿಂದ ದಿನಾಂಕ 03-05-2021ರ ಬೆಳಿಗ್ಗೆ 7 ಗಂಟೆಯವರೆಗೆ ಕೋವಿಡ್-19 ಸೋಂಕಿನಿಂದ ಬಾಧಿತರಾದ ಸುಮಾರು 23 ಸೋಂಕಿತರು ಸಾವಿಗೆ ತುತ್ತಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

NEWS DESK

TIMES OF BENGALURU