ಆಮ್ಲಜನಕ ಉತ್ಪಾದಕರ ಜೊತೆ ಸಿಎಂ ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಪ್ರತಿನಿತ್ಯ ನೂರಾರು ಮಂದಿ ಪ್ರಾಣ ಬಿಟ್ಟಿದ್ದಾರೆ. ಇತ್ತೀಚಿಗಷ್ಟೇ ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಮತ್ತು ವೈದ್ಯಕೀಯ ವ್ಯವಸ್ಥೆ ಇಲ್ಲದೇ 24ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.ಇನ್ನು ಈ ಬಗ್ಗೆ ಸಭೆ ನಡೆಸಿರುವ ಸಿಎಂ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ .ಈಗ ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು.

ಆಕ್ಸಿಜನ್ ಟ್ಯಾಂಕರ್‍ಗಳನ್ನು ತುಂಬಿಸುವ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು. ಆಕ್ಸಿಜನ್ ಟ್ಯಾಂಕರ್‍ಗಳು ತಡೆರಹಿತ ಪ್ರಯಾಣಕ್ಕಾಗಿ ಗ್ರೀನ್ ಕಾರಿಡಾರ್‍ಗಳನ್ನು ಒದಗಿಸುವುದು.
ಟೋಲ್‍ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ಗಳಿಗೆ ನಿರ್ದೇಶನ ನೀಡುವುದು.

NEWS DESK

TIMES OF BENGALURU