ಈ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು

ಬೆಂಗಳೂರು : ಚಾಮರಾಜನಗರದಲ್ಲಿ ಸಂಭವಿಸಿದ ದುರಂತದಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆ ನೀಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು.

ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಆಕ್ರೋಶ ಹೊರಹಾಕಿದ್ದಾರೆ.

NEWS DESK

TIMES OF BENGALURU