ಸಿಂಪಡನೆ ಕಾರ್ಯಕ್ಕೆ ಗೃಹ ಸಚಿವರಿಂದ ಚಾಲನೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕೊರೊನಾ ಸೋಂಕಿತ ಪ್ರದೇಶಗಳಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ಕಾರ್ಯಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಬೆಂಗಳೂರಿನ ಟೌನ್ ಹಾಲ್ ಬಳಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಸಾಯನಿಕ ದ್ರಾವಣವನ್ನು ಸಿಂಪಡಿಸುವ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಸಚಿವ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಳೆದ ಬಾರಿ ಕೋವಿಡ್ ಸೋಂಕು ಹರಡಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಸೋಂಕು ಹೆಚ್ಚು ಜನರಿಗೆ ತಗುಲಿದ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗಿತ್ತು.

NEWS DESK

TIMES OF BENGALURU