ಮೂವರು ಮಾತ್ರ ಆಕ್ಸಿಜನ್ ಸಿಗದೆ ಮೃತಪಟ್ಟಿದ್ದಾರೆ

ಬೆಂಗಳೂರು : ಚಾಮರಾಜನಗರ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ 24 ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ನಿನ್ನೆ ಬೆಳಗ್ಗೆ 7 ಗಂಟೆಯಿಂದ ಮಧ್ಯರಾತ್ರಿವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಇವರು ಕೋವಿಡ್​ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 12 ರಿಂದ ಬೆಳಗ್ಗೆ 3ಗಂಟೆವರೆಗೆ 3 ಸಾವನ್ನಪ್ಪಿದ್ದು, ಮುಂಜಾನೆ 3 ರಿಂದ 7ರವರೆಗೆ 7 ಜನ ಸಾವನ್ನಪ್ಪಿದ್ದು, 24 ಗಂಟೆಯಲ್ಲಿ ಒಟ್ಟು 23 ಜನರು ಸಾವಿಗೀಡಾಗಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಆಕ್ಸಿಜನ್​ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಸುಧಾಕರ್​ ತಿಳಿಸಿದ್ದಾರೆ.

NEWS DESK

TIMES OF BENGALURU