ಆಕ್ಸಿಜನ್ ಸಿಗದೆ ಇಬ್ಬರು ಸೋಂಕಿತರು ಮೃತ

ಬೆಂಗಳೂರು: ನಿನ್ನೆಯಷ್ಟೇ ರಾಜ್ಯವೇ ಬೆಚ್ಚಿಬೀಳಿಸುವಂತಹ ಘಟನೆ ಚಾಮರಾಜನಗರದಲ್ಲಿ ನಡೆದಿತ್ತು. ಆಕ್ಸಿಜನ್ ಸಿಗದೇ ಸುಮಾರು 24 ಸೋಂಕಿತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರಿನ ಯಲಹಂಕ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳು ಸಾವನ್ನಪ್ಪಿರುವ ಘಟನೆ ನ್ಯೂಟೌನ್ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ನಿನ್ನೆ ತಡ ರಾತ್ರಿ 12.30 ಕ್ಕೆ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 15 ಜನರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

NEWS DESK

TIMES OF BENGALURU