ಪ್ರಥಮ ಪಿಯುಸಿ ಪರೀಕ್ಷೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇರೋದ್ರ ಹಿನ್ನೆಲೆ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ರಾಜ್ಯ ಸರ್ಕಾರ ಮುಂದೂಡಿದೆ ಎಂದು ಸಚಿವ ಎಸ್​. ಸುರೇಶ್​ ಕುಮಾರ್​ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನ ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ರು.

ವಿಧಾನಸೌಧದಲ್ಲಿ ಈ ಸಂಬಂಧ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸುರೇಶ್​ ಕುಮಾರ್​ ಬಳಿಕ ಈ ಮಾಹಿತಿಯನ್ನ ನೀಡಿದ್ದಾರೆ. ಅಲ್ಲದೇ ಪರಿಷ್ಕೃತ ದಿನಾಂಕವನ್ನ 15-20 ದಿನಗಳ ಮುಂಚಿತವಾಗಿಯೇ ಪ್ರಕಟಿಸಲಾಗುವುದು. ಹೀಗಾಗಿ ಪರೀಕ್ಷೆ ತಯಾರಿಯಲ್ಲಿರುವ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

NEWS DESK

TIMES OF BENGALURU