ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿದ್ದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯನ್ನು ರದ್ದುಗೊಳಿಸಲಾಗಿದೆ. ಕೆಕೆಆರ್ ತಂಡದ ಸಂದೀಪ್ ವಾರಿಯರ್ ಮತ್ತು ವರುಣ್ ಚಕ್ರವರ್ತಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯ ರದ್ದುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಹಲವು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಾರಿಯ ಐಪಿಎಲ್ ಟೂರ್ನಿಯನ್ನು ದಿಢೀರನೆ ರದ್ದುಗೊಳಿಸಿದೆ.
NEWS DESK
TIMES OF BENGALURU