ಸದ್ಯಕ್ಕೆ ಲಾಕ್ ಡೌನ್ ವಿಸ್ತರಣೆ ಇಲ್ಲ

ಬೆಂಗಳೂರು: ಲಾಕ್ ಡೌನ್ ಮುಂದುವರೆಸುವ ಯೋಚನೆ ಸರ್ಕಾರದ ಮುಂದಿಲ್ಲ. ಮೇ 12 ರ ವರೆಗೆ ಜನತಾ ಕರ್ಫ್ಯೂ ಇರಲಿದ್ದು, ಇದರ ಕುರಿತು ನಂತರದ ಸಭೆಗಳಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ನಡೆದ ತುರ್ತು ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ವಿಸ್ತರಣೆ ಇಲ್ಲ. ಹಾಲಿ ಇರುವ ಕರ್ಫ್ಯೂ ಮುಂದುವರೆಯಲಿದೆ. ಪ್ರತಿಯೊಂದು ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳ ಹೊಣೆ ಹೊರಬೇಕು. ರಾಜ್ಯಕ್ಕೆ ಅಗತ್ಯ ಆಕ್ಸಿಜನ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

NEWS DESK

TIMES OF BENGALURU