ಬೆಂಗಳೂರು : ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಉಡಾಫೆ ಉತ್ತರ ನೀಡಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರನ್ನ ಭೇಟಿಯಾದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಎಲ್ಲರಂತೆ ಸರ್ಕಾರವನ್ನು ಸಮರ್ಥಿಸಿಕೊಂಡರು. ಸಭೆ ಬಳಿಕ ಅಲ್ಲಿ ಚರ್ಚೆ ಮಾಡುತ್ತೇವೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳು ಇರ್ತಾರೆ.
ಅವರು ಕೆಲಸ ಮಾಡದೇ ಹೋದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು. ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂದು ಹೇಳಿ ಜಾರಿಕೊಂಡರು. ಎರಡು ಗಂಟೆಗೆ ಆಕ್ಸಿಜನ್ ಖಾಲಿ ಆಗುತ್ತೆ ಗೊತ್ತಿದ್ರೆ, 12 ಗಂಟೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಖಾರವಾಗಿ ನುಡಿದರು .
NEWS DESK
TIMES OF BENGALURU