ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳುತ್ತೇವೆ

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್ ಗಳ ಅಕ್ರಮ ಬುಕ್ಕಿಂಗ್ ದಂಧೆಯಲ್ಲಿ ಯಾರೇ ಭಾಗಿಯಾಗಿದ್ರೂ ಕೂಡ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿ ದ್ದಾರೆ. ಈ ಬೆನ್ನಲ್ಲೇ ಈ ಬಗ್ಗೆ ಸಿಸಿಬಿ ತನಿಖೆ ನಡೆಸಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಮಲ್ ಪಂತ್, ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿ ಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.ಈ ಬಗ್ಗೆ ಸಮಗ್ರ ತನಿಖೆಯನ್ನು ಸಿಸಿಬಿ ತಂಡ ನಡೆಸಲಿದೆ ಎಂದಿದ್ದಾರೆ.

NEWS DESK

TIMES OF BENGALURU