ಪತ್ರಕರ್ತರು ಫ್ರಂಟ್ ಲೈನ್ ವಾರಿಯರ್ಸ್

ಬೆಂಗಳೂರು : ಸದ್ಯಕ್ಕೆ ರಾಜ್ಯದಲ್ಲಿ ಪೂರ್ಣಪ್ರಮಾಣದ ಲಾಕ್‌ಡೌನ್‌ ಇಲ್ಲ. ಬದಲಾಗಿ ಜನತಾ ಕರ್ಫ್ಯೂ ಮುಂದುವರಿಯಲಿದೆ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮೇ 22ರವರೆಗೂ ವಿಸ್ತರಿಸುವ ಕುರಿತು ಮುಂದಿನ ಸಭೆಯಲ್ಲಿ ನಿರ್ಧಿಸಲಾಗುವುದು ಎಂದರು. ಪತ್ರಕರ್ತರನ್ನು ಕೊರೊನಾ ಮುಂಚೂಣಿ ಕಾರ್ಯಕರ್ತರು (ಫ್ರಂಟ್‌ಲೈನ್‌ ವರ್ಕರ್ಸ್‌) ಎಂದು ಘೋಷಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿನ ಕೊರೊನಾ ಸೋಂಕಿನ ಪರಿಸ್ಥಿತಿ ಮತ್ತು ಆಕ್ಸಿಜನ್ ಸರಬರಾಜು ಕುರಿತಂತೆ ವಿಧಾನ ಸೌಧದಲ್ಲಿ ಆಯೋಜಿಸಿದ್ದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗಳಲ್ಲಿ ಕೊವಿಡ್ ಸಂಬಂಧಿತ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಸರಿಪಡಿಸಬೇಕು. ಮೆಡಿಕಲ್ ಆಕ್ಸಿಜನ್ ಸರಬರಾಜು ವ್ಯವಸ್ಥೆಯ ಜವಾಬ್ಧಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.

NEWS DESK

TIMES OF BENGALURU