ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ- ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೋನ ರೋಗಕ್ಕೂ ಯಾಕೆ ಎಳೆದು ತರುತ್ತೀರಿ? ಕೊರೋನ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್. ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ ಸಂಸದ ತೇಜಸ್ವಿ ಸೂರ್ಯ ಅವರು ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ತೇಜಸ್ವಿ ಸೂರ್ಯ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

NEWS DESK

TIMES OF BENGALURU