ಇನ್ನಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಿ

ಬೆಂಗಳೂರು : ಕೊವಿಡ್-19 ರೋಗಿಗಳಿಗೆ ಹಾಸಿಗೆ ನೀಡುವ ವಿಚಾರದಲ್ಲೂ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವು ಬಿಬಿಎಂಪಿ ಮತ್ತು ಅಧಿಕಾರಿಗಳ ವಿರುದ್ಧ ಬೊಟ್ಟು ಮಾಡುತ್ತಿರುವುದು ಏಕೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣ ಬೈರೇಗೌಡ ಪ್ರಶ್ನೆ ಮಾಡಿದ್ದಾರೆ. ಇಂದು ಬಿಜೆಪಿ ಸಂಸದರು ಹಾಗೂ ಶಾಸಕರು ತಮ್ಮ ವೈಫಲ್ಯಕ್ಕೆ ಬಿಬಿಎಂಪಿ ಅಧಿಕಾರಿಗಳನ್ನು ದೂರುತ್ತಿರುವುದಕ್ಕೆ ಎರಡು ಕಾರಣಗಳನ್ನು ನೀಡಿದ್ದಾರೆ.

ಒಂದು ಬಿಜೆಪಿ ಸರ್ಕಾರಕ್ಕೆ ತನ್ನದೇ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಮೇಲೆ ನಿಯಂತ್ರಣ ಹೊಂದುವುದಕ್ಕೆ ಸಾಧ್ಯವಾಗಿಲ್ಲವೇ” ಎಂದು ಪ್ರಶ್ನಿಸಿದ್ದಾರೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಜನರು ಹಾಸಿಗೆಗಳು ಸಿಗದೇ ನರಕಯಾತನೆ ಅನುಭವಿಸುತ್ತಿದ್ದಾರೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ದಯವಿಟ್ಟು ನಾಟಕ ಆಡುವುದನ್ನು ಬಿಟ್ಟು ಅಗತ್ಯವಿರುವ ರೋಗಿಗಳಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಕೆಲಸವನ್ನು ಮಾಡಿರಿ” ಎಂದು ಕೃಷ್ಣ ಬೈರೇಗೌಡ ಟ್ವೀಟ್ ಮಾಡಿದ್ದಾರೆ.

NEWS DESK

TIMES OF BENGALURU