ರಾಜ್ಯದಲ್ಲಿ ಅರ್ಧ ಶತಕ ಬಾರಿಸಿದ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಂದು ವಿರಾಟ ರೂಪ ತಾಳಿದೆ. ತನ್ನದೇ ದಾಖಲೆಯನ್ನು ಮುರಿದು ಕೊರೋನಾ ಹೊಸ ದಾಖಲೆ ಸೃಷ್ಟಿಸಿದೆ. ಮೊದಲ ಬಾರಿಗೆ ರಾಜ್ಯದಲ್ಲಿ ಅರ್ಧ ಲಕ್ಷ ಮಂದಿ 24 ಗಂಟೆಗಳ ಅವಧಿಯಲ್ಲಿ ಸೋಂಕಿಗೆ ತುತ್ತಾಗಿದ್ದಾರೆ. ಇಂದು ಒಂದೇ ದಿನ ರಾಜ್ಯಾದ್ಯಂತ 50,112 ಪಾಸಿಟಿವ್? ಪ್ರಕರಣಗಳು ದಾಖಲಾಗಿವೆ. ಆ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್?ಗಳ ಸಂಖ್ಯೆ 17,41,053ಕ್ಕೆ ಏರಿಕೆಯಾಗಿದೆ. ಇದರಲ್ಲಿ 4,87,288 ಸಕ್ರಿಯ ಪ್ರಕರಣಗಳಿವೆ. ಇನ್ನು ಸಾವಿನ ಸಂಖ್ಯೆಯೂ ತೀವ್ರ ಪ್ರಮಾಣದಲ್ಲಿ ಏರಿಕೆಯಾಗಿದೆ.24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 346 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈವರೆಗೆ ಸೋಂಕಿನಿಂದ 16,884 ಮಂದಿ ಸಾವನ್ನಪ್ಪಿದ್ದಾರೆ.

NEWS DESK

TIMES OF BENGALURU