ಬೆಡ್ ಬ್ಲಾಕಿಂಗ್ ದಂಧೆ: ತನಿಖೆ ಆರಂಭಿಸಿದ ಸಿಸಿಬಿ

ಬೆಂಗಳೂರು: ಸರ್ಕಾರದ ಕೋಟಾದಡಿ ಕೊರೊನಾ ಸೋಂಕಿತರಿಗೆ ಮಂಜೂರು ಮಾಡಬೇಕಿದ್ದ ಬೆಡ್‍ಗಳನ್ನು ಬ್ಲಾಕಿಂಗ್ ಮಾಡುವ ದಂಧೆಯ ಪ್ರಕರಣವನ್ನು ಸಿಸಿಬಿ ಪೊಲೀಸರ ತನಿಖೆಗೆ ವಹಿಸಲಾಗಿದೆ. ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ನಡೆಸುವ ಮೂಲಕ ಬಿಬಿಎಂಪಿ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆ ಎಳೆದಿದ್ದರು.
ಸುದ್ದಿಗೋಷ್ಠಿ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ತನಿಖೆಗೆ ವಹಿಸಲಾಗಿದೆ. ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ಇಬ್ಬರು ಬಿಬಿಎಂಪಿ ವೈದ್ಯರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದಲ್ಲದೇ ಸೀಟ್ ಬ್ಲಾಕಿಂಗ್ ಆಗಿದ್ದ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಸಹ ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು  ಮುಂದಾಗಿದ್ದಾರೆ.

NEWS DESK

TIMES OF BENGALURU