ಬೆಡ್ ಬ್ಲಾಕಿಂಗ್ ದಂಧೆಯ ತನಿಖಾ ವರದಿ ಸಲ್ಲಿಸಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಅಕ್ರಮವಾಗಿ ಬೆಡ್ ಬ್ಲಾಕಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ತನಿಖಾ ಪ್ರಗತಿ ವರದಿ ಸಲ್ಲಿಸಬೇಕು ಎಂದು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಎಲ್ಲ ಜಿಲ್ಲೆಗಳಲ್ಲೂ ಪ್ರತ್ಯೇಕ ಸಹಾಯವಾಣಿ ಆರಂಭಿಸಬೇಕು. ಕೊವಿಡ್ ನಿಂದ ಆದಾಯ ಕಳೆದುಕೊಂಡವರಿಗೆ ಆಹಾರ ಭದ್ರತೆ ಒದಗಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಮತ್ತೊಂದೆಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶಂಕಿತ ಕೆಲ ವೈದ್ಯರು, ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

NEWS DESK

TIMES OF BENGALURU