ನ್ಯಾಯಾಂಗದ ತನಿಖೆಯಿಂದ ಸತ್ಯ ಹೊರಬರುತ್ತೆ

ಬೆಂಗಳೂರು : ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕರೆದು ಭೇಟಿ ಮಾಡಿದ್ದೆ. ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್​​ ಹೇಳಿಕೆ ಶುದ್ಧ ಸುಳ್ಳು. ನಿನ್ನೆ ನಾನು ಅಲ್ಲಿ ಭೇಟಿ ನೀಡಿದಾಗ ಆಸ್ಪತ್ರೆ ಡೀನ್, ಜಿಲ್ಲಾಧಿಕಾರಿ ಎಲ್ಲಾ ಆಕ್ಸಿಜನ್ ಕೊರತೆ ಬಗ್ಗೆ ಒಪ್ಪಿಕೊಂಡಿದ್ದಾರೆ.

NEWS DESK

TIMES OF BENGALURU