ಕನ್ನಡಿಗರ ಮೇಲೆ ಕೇಂದ್ರದಿಂದ ತಾರತಮ್ಯ

ಬೆಂಗಳೂರು : ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ 18-44 ವಯೋಮಾನದ ಅತೀ ಕಡಿಮೆ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ? ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿರುವ ಅವರು, ದೇಶದಲ್ಲಿ18-44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ ಮೇ 1ರಿಂದ ಆರಂಭವಾಗಿದೆ. ದೇಶದಲ್ಲಿ ಮಂಗಳವಾರದ ಹೊತ್ತಿಗೆ 6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ.

ಈ ಪೈಕಿ ಗುಜರಾತ್‌ನಲ್ಲಿ 1,61,000 ಜನರಿಗೆ ಲಸಿಕೆ ಹಾಕಲಾಗಿದ್ದರೆ, ಕರ್ನಾಟಕದಲ್ಲಿ ಕೇವಲ 3475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ.

NEWS DESK

TIMESS OF BENGALURU