ಬೆಡ್ ಬ್ಲಾಕ್ ದಂಧೆಕೋರರ ಬಂಧನ

ಬೆಂಗಳೂರು : ಕೊರೊನಾ ಸೋಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊಡಿಸಿ 1.20 ಲಕ್ಷ ರೂ. ಹಣ ಪೀಕಿದ್ದ ಮೂವರು ದಂಧೆಕೋರರನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಅರೋಗ್ಯ ಮಿತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ಸೇರಿದಂತೆ ಮೂವರು ಬಂಧನಕ್ಕೆ ಒಳಗಾಗಿದ್ದಾರೆ.
ನೆಲಮಂಗಲದ ಲಕ್ಷ್ಮಿದೇವಮ್ಮ ಎಂಬುವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪುರದ ಪೀಪಲ್ ಟ್ರೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ಷ್ಮೀದೇವಮ್ಮ ಆರೋಗ್ಯ ಸ್ಥಿತಿ ಕ್ಷೀಣಿಸಿತ್ತು. ಐಸಿಯು ಬೆಡ್ ಅಗತ್ಯತೆ ಬಿದ್ದಿದೆ. ಪೀಪಲ್ ಟ್ರೀ ನಲ್ಲಿ ಐಸಿಯು ವೆಂಟಿಲೇಟರ್ ಇಲ್ಲದ ಕಾರಣ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಇಬ್ಬರ ಸಂಪರ್ಕವನ್ನು ನೀಡಿದ್ದಾರೆ.

NEWS DESK

TIMES OF BENGALURU