ಬೆಂಗಳೂರು : ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಪರಿಶೀಲಿಸುವ ಸಲುವಾಗಿ ಇಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅವರು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಉಪಸ್ಥಿತಿಯಲ್ಲಿ ಬಿಬಿಎಂಪಿ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಉನ್ನತಾಧಿಕಾರಿಗಳ ಸಭೆ ನಡೆಸಿದರು.
ಈ ಸಭೆಯಲ್ಲಿ ಮಾತನಾಡಿದ ಅವರು ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಕೋವಿಡ್ 19 ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುವುದು ಅವಶ್ಯವಿದೆ. ಸರ್ಕಾರದಿಂದ ಅವರಿಗೆ ಬೇಕಾದ ನೆರವು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲರೂ ಸೇರಿ ಪರಿಸ್ಥಿತಿ ನಿಭಾಯಿಸಬೇಕಿದೆ ಎಂದರು.
NEWS DESK
TIMES OF BENGALURU