ತಪ್ಪಿತಸ್ತರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸುತ್ತೇವೆ

ಬೆಂಗಳೂರು : ಕೋವಿಡ್ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿತಸ್ತರು ಯಾವುದೇ ಉನ್ನತ ಸ್ಥಾನದಲ್ಲಿದ್ದರೂ ಅವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದರು.

ಬೆಡ್ ಹಂಚಿಕೆಯಲ್ಲಿನ‌ ಅವ್ಯವಹಾರ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ದಕ್ಷಿಣ ವಲಯದ ಕೋವಿಡ್ ಬೆಡ್ ಹಂಚಿಕೆ ಬಗ್ಗೆ ತನಿಖೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ವಲಯಗಳಲ್ಲಿ ತನಿಖೆ ನಡೆಯಲಿದೆ ಈಗಾಗಲೇ ಇಬ್ಬರು ವೈದ್ಯರು, ಡೇಟಾ ಆಪರೇಟರ್ಸ್ ಸೇರಿದಂತೆ ಒಟ್ಟು 8 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.

NEWS DESK

TIMES OF BENGALURU