ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ

ಬೆಂಗಳೂರು: ಕರ್ನಾಟಕಕ್ಕೆ ನಿತ್ಯ 1600 – 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಪ್ರಧಾನ ಮಂತ್ರಿ ಮೋದಿ ಅವರು ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಟ್ವೀಟ್  ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ.

NEWS DESK

TIMES OF BENGALURU