ಆಫ್‌ಲೈನ್ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ದೇಶಾದ್ಯಂತ ಕೊರೋನಾ ೨ನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸೋಂಕಿಗೆ ಕಡಿವಾಣ ಹಾಕಲು ಕಠಿಣ ನಿಯಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಯಲ್ಲಿ ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು Uಉಅ ಮುಂದೂಡಿದೆ. ಆಫ್‌ಲೈನ್‌ನಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಿ ಆದೇಶ ಹೊರಡಿಸಿದೆ. ಕೊರೋನಾ ಸಮಯದಲ್ಲಿ ಎಲ್ಲರ ಸುರಕ್ಷತೆ ಹಾಗೂ ಆರೋಗ್ಯವೇ ಮುಖ್ಯವಾಗಿದ್ದು, ದೇಶಾದ್ಯಂತ ಆಫ್‌ಲೈನ್ ಪರೀಕ್ಷೆಗಳನ್ನು ಮೇ ತಿಂಗಳಲ್ಲಿ ನಡೆಸದಂತೆ ಆದೇಶಿಸಲಾಗಿದೆ.

NEWS DESK

TIMES OF BENGALURU