ಅಂತರ್ ಜಿಲ್ಲಾ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಕಟ್ಟಿ ಹಾಕಲು 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಮೇ 10ರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೂ ಲಾಕ್‌ಡೌನ್ ಜಾರಿಯಲ್ಲಿ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸುವುದಾಗಿ ಹೇಳಿದರು. ಬೆಳಗ್ಗೆ 10 ಗಂಟೆವರೆಗೂ ತರಕಾರಿ, ಹಣ್ಣು ಖರೀದಿಗೆ ಅನುಮತಿ ನೀಡಲಾಗಿದೆ. ಅಂತರ್-ಜಿಲ್ಲೆ, ಅಂತರ್-ರಾಜ್ಯ ಹಾಗೂ ಅಂತರಾಷ್ಟ್ರೀಯ ಸಂಚಾರಕ್ಕೆ ಸಂಬಂಧಿಸಿದ ನಿಯಮಗಳು ಎಲ್ಲರೂ ಹುಬ್ಬೇರಿಸುವಂತೆ ಮಾಡುತ್ತವೆ ಎಂದರು.

NEWS DESK

TIMES OF BENGALURU