ಇಂದಿರಾ ಕ್ಯಾಂಟೀನ್‍ನಿಂದ ಉಚಿತ ಆಹಾರ ನೀಡಿ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ ಮೂಲಕ ಬಡವರಿಗೆ ಉಚಿತ ಆಹಾರ ನೀಡಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಲಾಕ್‌ಡೌನ್‌ಗೆ ನಮ್ಮ ವಿರೋಧವಿಲ್ಲ. ನಮ್ಮ ಸಹಕಾರವಿದೆ. ಆದರೆ, ಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ನೆರವು ನೀಡಬೇಕು. ರಾಜ್ಯದಲ್ಲಿ ಎಲ್ಲರಿಗೂ ಉಚಿತವಾಗಿ ಹಾಗೂ ಸುಲಭವಾಗಿ ಲಸಿಕೆ ಸಿಗುವಂತೆ ಸರ್ಕಾರ ನೋಡಿಕೊಳ್ಳಬೇಕು. ಇಂದಿರಾ ಕ್ಯಾಂಟೀನ್‌ ಮೂಲಕ ಬಡವರಿಗೆ ಉಚಿತ ಆಹಾರ ನೀಡಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಒತ್ತಾಯಿಸಿದ್ದಾರೆ.

NEWS DESK

TIMES OF BENGALURU